Latest

*ಖೋ ಖೋ ಆಡುತ್ತಾ ಕುಸಿದು ಬಿದ್ದ ವಿದ್ಯಾರ್ಥಿ; ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಾಲೆಯಲ್ಲಿ ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಶಾಂಕ್ (13) ಮೃತ ಬಾಲಕ. ಶಾಲೆ ಮುಗಿದ ಬಳಿಕ ಇತರ ವಿದ್ಯಾರ್ಥಿಗಳ ಜೊತೆ ಖೋ ಖೋ ಆಡುತ್ತಿದ್ದಾಗ ಶಶಾಂಕ್ ಕುಸಿದು ಬಿದ್ದಿದ್ದಾನೆ.

ತಕ್ಷಣ ಆತನನ್ನು ಹೆಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

Home add -Advt

Related Articles

Back to top button