ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ನಾಗರಮುನ್ನೋಳಿ ೧೧೦ ಕೆವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಉಪಕರಣ ಮತ್ತು ಪರಿವರ್ತಕಗಳ ನಿರ್ವಹಣಾ ಕೆಲಸ ಕೈಗೊಳ್ಳಲಿರುವುದರಿಂದ ನಾಗರಮುನ್ನೋಳಿ ೧೧೦ ಕೆವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ೧೧ ಕೆವ್ಹಿ ಫೀಡರುಗಳಿಗೆ ಹಾಗೂ ಸಂಬಂಧಿಸಿದ ಗ್ರಾಮ, ಪ್ರದೇಶಗಳಿಗೆ ಮೇ ೨೫ ರಂದು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆಯವೆರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದು ಎಂದು ಚಿಕ್ಕೋಡಿ ಕಾರ್ಯ ಮತ್ತು ಪಾಲನಾ ವಿಭಾಗ, ಹುವಿಸಕಂನಿ ಕಾರ್ಯ ನಿರ್ವಾಹಕ ಇಂಜನೀಯರ(ವಿ)ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ ೨೬ ರಂದು ವಿದ್ಯುತ್ ವ್ಯತ್ಯಯ
ಮೇ ೨೬ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೦೬ ಗಂಟೆಯವರೆಗೆ ಯು.ಜಿ ಕೇಬಲ್ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಶೆ ಕಾಲನಿ, ಓಂಕಾರ ನಗರ, ಮಚ್ಛೆ, ಝಾಡಶಾಪೂರ, ದೇಸೂರ, ಸುಸ್ಗ್ಯಾನಟ್ಟಿ, ಸಂಭಾಜಿ ನಗರ, ಪೀರಣವಾಡಿ, ಖಾದರವಾಡಿ, ಹುಂಚ್ಯಾನಟ್ಟಿ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ವ್ಹಿ.ಟಿ.ಯು, ಕೆ.ಪಿ.ಟಿ.ಸಿ.ಎಲ್ ವಸತಿ ಗೃಹಗಳು, ಕೆ.ಎಸ್.ಆರ್.ಪಿ ಪೋಲೀಸ್ ವಸತಿ ಗೃಹಗಳು, ಅಶೋಕ ಐರನ್ ಕಾಲನಿ, ನಾವಗೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮೇ ೨೬ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೦೫ ಗಂಟೆಯವರೆಗೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ಮುತ್ನಾಳ, ವಿರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ