Latest

ಮುರುಘಾಶ್ರೀ ಬಂಧನ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀಗಳನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪೊಲಿಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ತನಿಖೆ ನಡೆಸಲಾಗುತ್ತಿದೆ ಈ ಸಂದರ್ಭದಲ್ಲಿ ನಾನು ಮಾತನಾಡುವುದು ಸರಿಯಲ್ಲ ಎಂದರು.

ಕಾನೂನ ಪ್ರಕಾರ ಏನು ನಡೆಯಬೇಕು ಎಲ್ಲವೂ ನಡೆಯುತ್ತೆ. ಎಲ್ಲದಕ್ಕೂ ಉತ್ತರ ಕೊಡಬೇಕು ಎಂದೇನೂ ಇಲ್ಲ. ಇಂತಹ ಸಂದರ್ಭದದಲ್ಲಿ ಪ್ರತಿಕ್ರಿಯಿಸುವುದು, ವ್ಯಾಖ್ಯಾನ ನೀಡುವಂತಹ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಮುರುಘಾಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ; ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

https://pragati.taskdun.com/latest/murughashree-caseb-s-yedyurappareaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button