
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳನ್ನು ಬಂಧಿಸಿದ ಬಳಿಕ ಯಾವುದೇ ಮಾಹಿತಿ ನೀಡದೇ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ತಕ್ಷಣ ಕೋರ್ಟ್ ಗೆ ಹಾಜರು ಪಡಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.
ಕಾರಾಗೃಹದಲ್ಲಿದ್ದ ಮುರುಘಾಶ್ರೀಗಳಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೋರ್ಟ್ ಗೆ ಮಾಹಿತಿ ನಿಡದೇ ಹೀಗೆ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಕೋರ್ಟ್ ಪ್ರಶ್ನಿಸಿದ್ದು, ಮುರುಘಾಶ್ರೀಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರು ಪಡಿಸುವಮ್ತೆ ಜೈಲಧಿಕಾರಿಗಳಿಗೆ ಸೂಚಿಸಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಮುರುಘಾಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಇಂದು ಮತ್ತೆ ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಬೇಕಿತ್ತು. ಶ್ರೀಗಳನ್ನು ಹೆಚ್ಚಿನ ವಿಚಾರಣೆಗಾಗಿ ನಾಲ್ಕುದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲಿಸರು ಕೋರ್ಟ್ ಗೆ ಮನವಿಯನ್ನು ಮಾಡಿದ್ದರು. ಆದರೆ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶ್ರೀಗಳನ್ನು ಕೋರ್ಟ್ ಗೆ ಹಾಜರು ಪಡಿಸಲು ಸಿದ್ಧತೆ ನಡೆದಿದೆ.
ಮುರುಘಾಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ