Latest

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಮುರುಘಾಶ್ರೀ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಶರಣರು ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಉಮೇಶ್ ಎಂಬುವವರು ಮುರುಘಾಶ್ರೀಗಳ ಪರ ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸಿಆರ್ ಪಿಸಿ 439ರಡಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Home add -Advt

ಮುರುಘಾಶ್ರೀಗಳಿಗೆ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ವರದಿ ಆಧಾರದಲ್ಲಿ ಜಾಮೀನಿಗಾಗಿ ಮನವಿ ಮಾಡಿದ್ದು, ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಮುರುಘಾಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಿ ಸೆ.5ರವರೆಗೆ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ಅಡುಗೆ ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

https://pragati.taskdun.com/latest/gas-cylinder-blasttwo-injuredbangalore/

Related Articles

Back to top button