ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು ವೈದ್ಯಕೀಯ ಪರೀಕ್ಷೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳಿಗೆ ಇಂದು ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಡಾ.ಸತೀಶ್ ನೇತೃತ್ವದ ವೈದ್ಯರ ತಂಡ ವೀರ್ಯದ ಸ್ಯಾಂಪಲ್ ಸಂಗ್ರಹಿಸಿದೆ. ನಿನ್ನೆ ಮುರುಘಾಶ್ರೀಗಳ ರಕ್ತದ ಮಾದರಿ, ಕೂದಲು, ಉಗುರು ಸಂಗ್ರಹಿಸಿದ್ದ ವೈದ್ಯರ ತಂಡ ಇಂದು ಹೆಚ್ಚಿನ ವೈದ್ಯಕೀಯ ತಪಾಸಣೆ ನಡೆಸಿ ಸ್ಯಾಂಪಲ್ ನ್ನು ಎಫ್ ಎಸ್ ಎಲ್ ಗೆ ರವಾನಿಸಿದೆ.
ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಮುರುಘಾಶ್ರೀಗಳನ್ನು ಪೊಲೀಸರು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಗೆ ಕರೆತಂದಿದ್ದು, ವಿಚಾರಣೆ ನಡೆಸಿದ್ದಾರೆ.
ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಮುರುಘಾಶ್ರೀ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ