Latest

ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಕೇಸ್; ಆರೋಪಿಗೆ ಭಯೋತ್ಪಾದಕರ ಲಿಂಕ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕೆಲ ದಿನಗಳ ಹಿಂದೆ ವೀರ ಸಾವರ್ಕರ್ ಭಾವಚಿತ್ರ ವಿವಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಉಗ್ರರ ಜತೆ ಸಂಪರ್ಕವಿದೆ ಎಂಬ ಬಗ್ಗೆ ತಿಳಿದುಬಂದಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಬಹಿರಂಗಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಯುವಕ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಜಬೀ ಎಂಬಾತನಿಗೆ ಭಯೋತ್ಪಾದಕರ ಜತೆ ಸಂಪರ್ಕವಿದೆ ಎಂಬ ಅಂಶ ಗೊತಾಗಿದೆ. ಶೀಘ್ರದಲ್ಲಿಯೇ ಈ ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರಿಸಲಾಗುವುದು ಎಂದರು.

ಶಿವಮೊಗ್ಗದಲ್ಲಿ ಶಾಂತಿ ನಡಿಗೆ ಜಾಥಾ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ಶಿವಮೊಗ್ಗ ಜಿಲ್ಲೆ ಸಂಪೂರ್ಣ ಶಾಂತಿಯುತವಾಗಿದೆ. ಆಗಾಗ ಇಂತಹ ಆಕಸ್ಮಿಕ ಘಟನೆಗಳು ನಡೆಯುತ್ತಿರುತ್ತವೆ. ರಾಜಕೀಯ ಪಕ್ಷ ಹೊರತುಪಡಿಸಿ ಕಾರ್ಯಕ್ರಮ ನಡೆಯುತ್ತಿದೆ ಎಂದು ತಿಳಿಸಿದರು.
ಮುರುಘಾಶ್ರೀಗಳ ವೈದ್ಯಕೀಯ ಪರೀಕ್ಷೆ ಅಂತ್ಯ

Home add -Advt

Related Articles

Back to top button