ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚಿರತೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಹಲವಾರು ದಿನಗಳಿಂದ ರಜೆ ನೀಡಲಾಗಿದ್ದ 22 ಶಾಲೆಗಳು ಸೋಮವಾರ(ಸೆ.5)ದಿಂದ ಯಥಾಪ್ರಕಾರ ಆರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ನಾಲತವಾಡ ಅವರು ತಿಳಿಸಿದ್ದಾರೆ.
ನಗರದಲ್ಲಿ ಚಿರತೆ ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆ ನೀಡಲಾಗಿತ್ತು.
ಇದೀಗ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಯಥಾಪ್ರಕಾರ ಶಾಲೆಗಳು ಕಾರ್ಯನಿರ್ವಹಿಸಲಿವೆ. ಪಾಲಕರು ಹಾಗೂ ಶಾಲೆಗಳು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
https://pragati.taskdun.com/latest/leopard-escapes-from-belgaum-official-decision-announced-by-forest-department/
https://pragati.taskdun.com/belagavi-news/forest-and-police-personnel-conducted-a-massive-combing-operation-in-the-wee-hours-of-sunday/
https://pragati.taskdun.com/latest/belagavioparation-cheetachiratesocial-media-postviral/
https://pragati.taskdun.com/latest/belagavi-ganeshotsava-celebration-heavyrain-leopard-fear-people/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ