ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ರಾತ್ರಿಯಿಡಿ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಮುಂದಿನ ಮೀಊರು ಗಂಟೆಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಚಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜಧಾನಿಯಲ್ಲಿ ಮಳೆ ಅವಾಂತರದಿಂದಾಗಿ ಶಾಂತಿನಗರದ ಬಿಎಂಟಿಸಿ ಬಸ್ ಡಿಪೋ ಮುಳುಗಡೆಯಾಗಿದ್ದು, ನೀರಿನ ಒಳ ಹರಿವು ಹೆಚ್ಚಾದ ಕಾರಣ ರಾಜಕಾಲುವೆಯಿಂದಲೇ ನೀರಿ ಡಿಪೊ ಒಳಗೆ ನುಗ್ಗಿದ್ದು, ಬಸ್ ಗಳು ನೀರಿನಲ್ಲಿಯೇ ನಿಂತಿವೆ.
ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ :ಅನುಭವಿ ಕಾನೂನು ತಜ್ಞರ ನೇಮಕ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ