ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂರನೇ ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿ ಬಸವಾದಿತ್ಯ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಯನ್ನು ಮಧ್ಯಾಹ್ನ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಮುರುಘಾಶ್ರೀ ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಮುರುಘಾಶ್ರೀ, ವಾರ್ಡನ್ ರಶ್ಮಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿತ್ತು. ಇದೀಗ ಮೂರನೇ ಆರೋಪಿ ಬಸವಾದಿತ್ಯನನ್ನು ಬಂಧಿಸಲಾಗಿದೆ.
18 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
https://pragati.taskdun.com/latest/heavy-rain18-disrictkarnataka/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ