ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಮುಂದೂಡಿದೆ.
ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.7ಕ್ಕೆ ಮುಂದೂಡಿದೆ. ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿದೆ.
ಇದೇ ವೇಳೆ ಪೊಲೀಸರು ಪ್ರಕರಣದ ಎರದನೇ ಆರೋಪಿ ವಾರ್ಡನ್ ರಶ್ಮಿಯನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಅರ್ಜಿ ಸಲ್ಲಿಸಿದ್ದು ಈ ನಿಟ್ಟಿನಲ್ಲಿ ಇಂದು ಆದೇಶ ಹೊರಬೀಳುವ ಸಾಧ್ಯತೆ ಇದೆ.
ಇನ್ನು ಮುರುಘಾಶ್ರೀಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಪೊಲೀಸ್ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಮುರುಘಾಶ್ರೀಗಳನ್ನು ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
Breaking News – ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ
https://pragati.taskdun.com/latest/murughashreebail-hearingjudicial-custody/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ