ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ರಾಜ್ಯದ 35ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಲವು ಸಂಘಟನೆಗಳ ಕೈವಾಡವಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಮಟ್ಟದಲ್ಲಿ ಈ ಸಂಘಟನೆಗಳ ಚಟುವಟಿಕೆ ಚುರುಕುಗೊಂಡಿವೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಎನ್ ಐ ಎ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮತ್ತೆ ಎರಡು ದಿನ ಭಾರಿ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
https://pragati.taskdun.com/latest/bangaloreheavy-raintwo-daysyellow-alert/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ