
ಪ್ರಗತಿವಾಹಿನಿ ಸುದ್ದಿ; ಗದಗ: ರಾಜ್ಯಾದ್ಯಂತ ಸಂಭವಿಸುತ್ತಿರುವ ವರುಣಾರ್ಭಟಕ್ಕೆ ಅನಾಹುತಗಳು ಸಂಭವಿಸುತ್ತಿದ್ದು, ಮಳೆ ಅವಾಂತರದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಪೊಲೀಸ್ ಕಾನ್ಸ್ ಟೇಬಲ್ ಗಳಿಬ್ಬರು ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ನಡೆದಿದೆ.
ಗಜೇಂದ್ರಗಡದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆಗಾಗಿ ಮುಂಡರಗಿ ಠಾಣೆ ಪೊಲಿಸರನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆ ಮುಗಿದ ಹಿನ್ನೆಲೆಯಲ್ಲಿ ಗಜೇಂದ್ರಗಡದಿಂದ ವಾಪಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ಬಂಡಿಹಾಳ ಗ್ರಾಮದ ಬಳಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಳ್ಳದಾಟುತ್ತಿದ್ದಾಗ ನೀರಿನ ರಭಸಕ್ಕೆ ಪೊಲೀಸ್ ಕಾನ್ಸ್ಟೇಬಲ್ ಗಳಾದ ಮಹೇಶ್ ಹಾಗೂ ನಿಂಗಪ್ಪ ಎಂಬುವವರು ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸ್ ಸಿಬ್ಬಂದಿಗಾಗಿ ಶೋಧ ನಡೆಸಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ BJP ಶಾಸಕ
https://pragati.taskdun.com/politics/bjp-mlaaravind-giriheart-attack/