Latest

BJP ಜನೋತ್ಸವ ಸಮಾವೇಶ ಮತ್ತೆ ರದ್ದು ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಮತ್ತೆ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.

ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಕೆ ಹಾಗೂ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕ್ರಮಗಳ ರೂಪುರೇಷೆ, ಶಕ್ತಿ ಪ್ರದರ್ಶನ ನಿಟ್ಟಿನಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಸಚಿವ ಉಮೇಶ್ ಕತ್ತಿ ಅವರ ಹಠಾತ್ ನಿಧನದಿಂದಾಗಿ ಸಮಾವೇಶ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Home add -Advt

 

ಆದರೆ ಈವರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜನೋತ್ಸವ ಕಾರ್ಯಕ್ರಮ ನಡೆಸಬೇಕೋ ಅಥವಾ ರದ್ದು ಮಾಡಬೇಕೋ ಎಂಬ ಬಗ್ಗೆ ನಿರ್ಧಾರ ಪ್ರಕಟಿಸಿಲ್ಲ. ಸಿಎಂ ನಿರ್ಧಾರದ ಮೇಲೆ ನಾಳಿನ ಜನೋತ್ಸವ ಕಾರ್ಯಕ್ರಮ ಅವಲಂಬಿತವಾಗಿದೆ. ಈ ಹಿಂದೆ ನಿಗದಿಯಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು.

ಮಣಿಪಾಲ್ ಸಮೂಹ ಸಂಸ್ಥೆಗಳಿಗೆ IT ಶಾಕ್

https://pragati.taskdun.com/latest/it-raidmanipal-groupbangalore50-places/

Related Articles

Back to top button