ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಮಾಡಿದ್ದಾರೆ.
ಬೆಳಗಾವಿಯ ಉಮೇಶ್ ಕತ್ತಿ ಸ್ವಗ್ರಾಮದಲ್ಲಿ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈ ಹಿನೆಲೆಯಲ್ಲಿ ಇಂದು ಕನ್ಯಾಕುಮಾರಿ ಪ್ರವಾಸವನ್ನು ಸಿದ್ದರಾಮಯ್ಯ ರದ್ದು ಪಡಿಸಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಕತ್ತಿ ನನಗೆ ಸ್ನೇಹಿತರಾಗಿದ್ದವರು. ಅವರ ಅಕಾಲಿಕ ನಿಧನ ಆಘಾತ ತಂದಿದೆ. ಕತ್ತಿಯವರು ಆರೋಗ್ಯದ ಬಗ್ಗೆ ಮೊದಲಿನಿಂದ ನಿರ್ಲಕ್ಷ ವಹಿಸಿದ್ದರು. ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಬೇಕಿತ್ತು. ಯಾಕೆಂದರೆ ಅವರು ಹಾಲಿ ಸಚಿವರಾಗಿದ್ದವರು. ನಾನು ಕೂಡ ಬೆಳಗಾವಿಗೆ ಹೋಗುತ್ತಿದ್ದೇನೆ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ ಎಂದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ
https://pragati.taskdun.com/latest/funeral-of-umesh-katti-with-full-state-honours/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ