ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗಿದೆ.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಉಮೇಶ್ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಂದು ಮುಂಜಾನೆ 7 ಗಂಟೆಗೆ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಬೆಳಗಾವಿಗೆ ಕೊಂಡೊಯ್ಯುವ ಯೋಜನೆಯಿತ್ತು. ಆದರೆ ಹವಾಮಾನ ವೈಫರಿತ್ಯ ಹಾಗೂ ವಿಶೇಷ ಏರ್ ಆಂಬುಲೆನ್ಸ್ ಬರಲು ತಡವಾಗಿದ್ದರಿಂದ ಪಾರ್ಥಿವ ಶರೀರ ರವಾನೆ ವಿಳಂಬವಾಗಿದೆ.
ಮಧ್ಯಾಹ್ನ 12: 35ರ ಸುಮಾರಿಗೆ ಹೆಚ್ ಎ ಎಲ್ ನಿಂದ ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ರವಾನಿಸಲಾಗಿದ್ದು, ವಿಮಾನದಲ್ಲಿ ಸಚಿವರ ಸಹೋದರ ರಮೇಶ್ ಕತ್ತಿ, ಪತ್ನಿ ಹಾಗೂ ಪುತ್ರರು ಇದ್ದಾರೆ. ಮಧ್ಯಾಹ್ನ 1:45ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿರುವ ಪಾರ್ಥಿವ ಶರೀರವನ್ನು ಬಳಿಕ ಅಲ್ಲಿಂದ ಸಚಿವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಕೆ ಕೊಂಡೊಯ್ಯಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.
ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ 10:30ರ ಸುಮಾರಿಗೆ ಹೃದಯಾಘಾತಕ್ಕೀಡಾಗಿ ಬೆಂಗಳೂರಿನ ಮನೆಯ ಬಾತ್ ರೂಮ್ ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ರಾ ಉಮೇಶ್ ಕತ್ತಿ?; ಸಿದ್ದರಾಮಯ್ಯ ಹೇಳಿದ್ದೇನು?
https://pragati.taskdun.com/latest/siddaramaiahcancelledkanyakumari-tripumesh-katti-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ