ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಆಹಾರ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರು ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳಿದ್ದಾರೆ.
ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ವಿಮಾನದಲ್ಲಿ ರವಾನಿಸಲಾಗಿದ್ದು, ಸಂಜೆ ಸಚಿವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ವಿಶೇಷ ವಿಮಾನದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್.ಅಶೊಕ್, ಸಿ.ಟಿ ರವಿ, ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಲಕ್ಷ್ಮಣ ಸವದಿ, ಅಭಯ್ ಪಾಟೀಲ್ ಸಿಎಂ ಜೊತೆ ಪ್ರಯಾಣ ಬೆಳೆಸಿದ್ದಾರೆ.
ಇದೇ ವೇಳೆ ವಿಪಕ್ಷ ನಾಯಕರು ಕೂಡ ಅಂತ್ಯಕ್ರಿಯಲ್ಲಿ ಭಾಗವಹಿಸಲು ಬೆಳಗಾವಿಯತ್ತ ಮತ್ತೊಂದು ವಿಶೇಷ ವಿಮಾನದಲ್ಲಿ ತೆರಳಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಅಮರೇಗೌಡ ಬೈಯ್ಯಾಪೂರೆ ಸೇರಿದಂತೆ ಮೊದಲಾದವರು ಕೂಡ ಬೆಳಗಾವಿಗೆ ಪ್ರಯಾಣಿಸಿದ್ದಾರೆ.
ಪ್ರಸ್ತುತ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ತಲುಪಿದ್ದು, ಅಲ್ಲಿಂದ ಅಲಕೃತಗೊಂಡ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ಸಚಿವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿದೆ. ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಬೆಳಗಾವಿಗೆ ಆಗಮಿಸಿದ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರ
https://pragati.taskdun.com/politics/umesh-kattideadbodybelagavisambra-airport/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ