Kannada NewsKarnataka NewsLatest

ಸರಕಾರದ ರೀತಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ – ಲಕ್ಷ್ಮೀ ಹೆಬ್ಬಾಳಕರ್  

 ಪ್ರಗತಿವಾಹಿನಿ ಸುದ್ದಿ, ​ ಬೆಳಗಾವಿ – ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮತ್ತು ಮಹಿಳೆಯರನ್ನು ಸ್ವಾವಲಂಬಿಯಾಗಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
 
ಉಚಗಾಂವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ​ಕಾರ್ಯಕ್ರಮ​ ​ಹಾಗೂ ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ​ ಅವರು ಮಾತನಾಡಿದ​ರು.
 ​ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ‌. ಹೇಮಾವತಿ ವೀ ಹೆಗ್ಗಡೆಯವರ ​ವ್ಯಕ್ತಿತ್ವ ಅತ್ಯಂತ ಎತ್ತರದ್ದು. ಅವರ ದೂರದೃಷ್ಟಿ ಮತ್ತು ವಿಶಾಲ ಮನೋಭಾವದಿಂದಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ.​ ಒಂದು ಸರಕಾರದ ರೀತಿಯಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು.
​​ಸಾಮೂಹಿಕ ಸತ್ಯನಾರಾಯಣ ಪೂಜಾ ವ್ಯವಸ್ಥಾಪನ ಸಮಿತಿ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕುದ್ರೆಮನಿ, ಕೊನೆವಾಡಿ, ಅತಿವಾಡ, ಬಾಚಿ ಹಾಗೂ ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಉಚಗಾಂವ ವಲಯ ಇವರ ಸಂಯುಕ್ತ ಆಶ್ರಯದಲ್ಲಿ​ ಕಾರ್ಯಕ್ರಮ ನಡೆಯಿತು.​
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು​ ಮುಕ್ತಿಮಠದ​ ಧರ್ಮಶ್ರೀ ತಪೋರತ್ನ ಷ. ಬ್ರ. ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅನಿತಾ ಚೌಗುಲೆ, ಪ್ರದೀಪ ಶೆಟ್ಟಿ, ಯುವರಾಜ ಕದಂ, ಜಾವೇದ ಜಮಾದಾರ, ಮಥುರಾ ತೆರಸೆ,  ಚಾಂಗದೇವ ಬೆಳಗಾಂವ್ಕರ್, ಎನ್ ಓ ಚೌಗುಲೆ, ವಿಧ್ಯಾ ಸರ್ನೋಬತ್, ಪರುಶರಾಮ ಪಾಂಡೆಕರ್, ನಾಗರಾಜ ಹಡ್ಲಿ ಹಾಗೂ ಗ್ರಾಮಾಭಿವೃದ್ಧಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

https://pragati.taskdun.com/politics/belagavirural-mla-laxmihebbalkar-inform-bharatjodo-walk-organise-congress-party/

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button