Latest

ಆ ಭಾಗದಲ್ಲಿ ಅತ್ಯುತ್ತಮವಾಗಿ ಪಕ್ಷ ಸಂಘಟನೆಯಾಗಿದೆ; ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, 2 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅತ್ಯುತ್ತಮವಾಗಿ ಪಕ್ಷ ಸಂಘಟನೆಯಾಗಿದೆ. ಮುಂದಿನ ದಿನಗಳಲ್ಲಿ ದಾಖಲೆ ಪ್ರಮಾಣದಲ್ಲಿ ಈ ಭಾಗದಲ್ಲಿ ವಿಜಯ ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ಅದರ ಸಂಕೇತವಾಗಿ ಇಂದಿನ ಜನಸ್ಪಮ್ದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ನಮ್ಮ ಸರ್ಕಾರ ಮಾಡಿದ ಕೆಲಸ, ಜನರ ಸಂಕಷ್ಟಕ್ಕೆ ಸ್ಪಂದಿಸಿದ ರೀತಿ, ಜನರಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ, ರೈತರಿಗೆ, ಮಹಿಳೆಯರು, ಯುವಕರು, ದೀನ ದಲಿತರಿಗೆ, ಬಡವರಿಗೆ ಸರ್ಕಾರದ ಯೋಜನೆಗಳ ಬಗ್ಗೆ, ಚುನಾವಣೆ ನಿಟ್ಟಿನಲ್ಲಿ ರೂಪಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ವಿವರವನ್ನು ಸಮಾವೇಶದಲ್ಲಿ ನೀಡಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ಇಂದು BJP ಜನಸ್ಪಂದನಾ ಸಮಾವೇಶ; 5000 ಬಸ್ ವ್ಯವಸ್ಥೆ

Home add -Advt

https://pragati.taskdun.com/politics/bjp-janaspandanasamaveshadoddaballapurapolice-security/

Related Articles

Back to top button