ಪ್ರಗತಿವಾಹಿನಿ ಸುದ್ದಿ; ದೊಡ್ಡಬಳ್ಳಾಪುರ: ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ಸರ್ಕಾರದ ಯೋಜನೆಗಳ ಬಗ್ಗೆ ಸಂಕ್ಷಿಪ್ತ ವಿವರವನ್ನು ನೀಡಿದರು. ಬಿಜೆಪಿ ಜನಬೆಂಬಲ, ಆಶಿರ್ವಾದ ಸದಾ ಇದ್ದು ಮುಂದಿನ ಚುನಾವಣೆಯಲ್ಲಿಯೂ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.
ಈ ಸಮಾವೇಶದ ಮೂಲಕ ಇಡೀ ರಾಜ್ಯಕ್ಕೆ ಕೇಳುವಂತೆ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಮತ್ತೆ ಕಮಲವನ್ನು ಅರಳಿಸುತ್ತೇವೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ, ಧಮ್ ಇದ್ದರೆ ತಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
ಜನರು ನಮ್ಮ ಮೇಲೆ ಇಟ್ಟ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ. 2019ರಲ್ಲಿಯೇ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಬೇಕಿತ್ತು. ಆದರೆ ಕಾಂಗ್ರೆಸ್ ಹುನ್ನಾರದಿಂದಾಗಿ ಕೈತಪ್ಪಿತ್ತು. ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ಏನು ಬೆಕಾದರೂ ಮಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ಶಾಸಕರೇ ಹೊರ ಬಂದರು. ಕಾಂಗ್ರೆಸ್ ನಿಂದ ಹೊರ ಬಂದ ಎಲ್ಲಾ ಶಾಸಕರು ವೀರರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಯಶಸ್ವಿ ಆಡಳಿತವನ್ನು ನೀಡಿದ್ದೇವೆ. ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ಎದುರಿಸಿದ್ದೇವೆ. ಉಚಿತ ಲಸಿಕೆಗಳನ್ನು ನೀಡಿದ್ದೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ದಾಖಲೆಗಳ ಮತಗಳಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವು ರಾಜ್ಯದ ಜನತೆಗೆ ಅನ್ನಭಾಗ್ಯ ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಚೀಲದಲ್ಲಿದ್ದ ಅಕ್ಕಿ ಮೋದಿಯವರದ್ದು, ಚೀಲ ಮಾತ್ರ ಅವರದ್ದು. ಅನ್ನಭಾಗ್ಯದಲ್ಲಿ ಅವ್ಯವಹಾರ ನಡೆಸಿದರು. ಅನ್ನಕ್ಕೆ ಕನ್ನ ಹಾಕಿದರು. ಲ್ಯಾಪ್ ಟಾಪ್ ಕೊಡುವ ಯೋಜನೆಯಲ್ಲಿಯೂ ಅಕ್ರಮ ನಡೆಸಿದರು. ಸಾಲು ಸಾಲು ಹಗರಣಗಳನ್ನು ಮಾಡಿದ್ದು ಕಾಂಗ್ರೆಸ್ ನವರು ಎಂದು ವಾಗ್ದಾಳಿ ನಡೆಸಿದರು.
ಜನಸ್ಪಂದನಾ ಸಮಾವೇಶ; ವೇದಿಕೆಯ ಮೇಲೆ ಸಚಿವರಾದ MTB, ಮುನಿರತ್ನ, ಶಾಸಕ ಎಸ್.ಆರ್ ವಿಶ್ವನಾಥ ಭರ್ಜರಿ ಡ್ಯಾನ್ಸ್
https://pragati.taskdun.com/politics/bjp-janaspandana-samaveshabjp-ledesdancedoddaballapura/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ