Latest

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ

ಪ್ರಗತಿವಾಹಿನಿ ಸುದ್ದಿ; ದೊಡ್ಡಬಳ್ಳಾಪುರ: ಇತ್ತೀಚೆಗೆ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೌಕರಿ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ತಿಳಿಸಿದರು.

ಜನಸ್ಪಂದನಾ ಸಮಾವೇಶದ ಆರಂಭದಲ್ಲಿ ಇತ್ತೀಚೆಗೆ ನಿಧನರಾಗಿರುವ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಬಿಜೆಪಿ ನಾಯಕರು ಪುಷ್ಪ ನಮನ ಸಲ್ಲಿಸಿದರು.

ಜನಸ್ಪಂದನಾ ಸಮಾವೇಶ; ವೇದಿಕೆಯ ಮೇಲೆ ಸಚಿವರಾದ MTB, ಮುನಿರತ್ನ, ಶಾಸಕ ಎಸ್.ಆರ್ ವಿಶ್ವನಾಥ ಭರ್ಜರಿ ಡ್ಯಾನ್ಸ್

Home add -Advt

https://pragati.taskdun.com/politics/bjp-janaspandana-samaveshabjp-ledesdancedoddaballapura/

Related Articles

Back to top button