ಪ್ರಗತಿವಾಹಿನಿ ಸುದ್ದಿ; ತಿರುವನಂತಪುರ: ಎಲೆಕ್ಟ್ರಿಕ್ ವಾಹನಕ್ಕೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಕೊಟ್ಟಿಲ್ಲ ಎಂದು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ ಘಟನೆ ಕೇರಳದಲ್ಲಿ ನಡೆದಿದೆ.
ಅಸಲಿಗೆ ಎಲೆಕ್ಟ್ರಿಕ್ ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಅಗತ್ಯವಿಲ್ಲ ಆದರೆ ಕೇರಳದ ಮಣಪ್ಪುರಂ ಜಿಲ್ಲೆಯ ನೀಲಾಂಚರಿಯಲ್ಲಿ ಸಂಚಾರಿ ವಿಭಾಗದ ಪೊಲೀಸರು ಎಲೆಕ್ಟ್ರಿಕ್ ಬೈಕ್ ಒಂದಕ್ಕೆ ದಂಡ ವಿಧಿಸಿದ್ದಾರೆ.
ಯುವಕನೊಬ್ಬ ಎಲೆಕ್ಟ್ರಿಕ್ ಕಂಪನಿಯ ತನ್ನ ಸ್ಕೂಟರ್ ತೆಗೆದುಕೊಂಡು ಹೋಗುತ್ತಿದ್ದಾಗ ಸ್ಥಳೀಯ ಟ್ರಾಫಿಕ್ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಪಿಯುಸಿ ಪ್ರಮಾಣಪತ್ರ ನೀಡಿಲ್ಲ ಎಂದು 250 ರೂಪಾಯಿ ದಂಡ ವಿಧಿಸಿ ರಶೀಧಿ ಕೊಟ್ಟು ಕಳುಹಿಸಿದ್ದಾರೆ. ಮನೆಗೆ ಬಂದು ರಶೀಧಿ ನೋಡಿದ ಯುವಕನಿಗೆ ಶಾಕ್ ಆಗಿದೆ ಎಲೆಕ್ಟ್ರಿಕ್ ಬೈಕ್ ಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವಿಲ್ಲ ಎಂದು ದಂಡವಿಧಿಸಿದ ಪೊಲೀಸರ ಪ್ರಮಾದದ ಬಗ್ಗೆ ಟ್ವೀಟ್ ಮೂಲಕ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾನೆ.
ಎಲೆಕ್ಟ್ರಿಕ್ ಬೈಕ್ ಗೂ ಪಿಯುಸಿ ಪ್ರಮಾಣಪತ್ರ ಕಡ್ಡಾಯ ಮಾಡಿರುವಿರಾ? ಎಂದು ಪ್ರಶ್ನಿಸಿದ್ದಾನೆ. ವಿಷಯ ಗೊತ್ತಾಗುತ್ತಿದ್ದಂತೆ ಮಣಪ್ಪುರಂ ಪೊಲೀಸರು ಸ್ಪಷ್ಟೀಕರಣ ನೀಡಿದ್ದು, ಇದು ಸಿಬ್ಬಂದಿಗಳ ಅಚಾತುರ್ಯದಿಂದ ಆಗಿರುವ ಘಟನೆ. ಯುವಕ ಡಿಎಲ್ ಪ್ರಸ್ತುತಪಡಿಸದಿದ್ದಕ್ಕೆ ದಂಡ ವಿಧಿಸಲಾಗಿತ್ತು. ಆದರೆ ಮಷಿನ್ ನಲ್ಲಿ ಆದ ತಪ್ಪಿನಿಂದಾಗಿ ಹೀಗಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ತೆಲಂಗಾಣ ಸಿಎಂ KCR ಭೇಟಿಯಾದ ಮಾಜಿ ಸಿಎಂ HDK
https://pragati.taskdun.com/latest/h-d-kumaraswamyk-chandrashekhar-raomeet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ