Latest

ಭಾರಿ ಮಳೆಗೆ ಕುಸಿದುಬಿದ್ದ ಮನೆ; ಯುವಕ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ದುರಂತಗಳು ಸಂಭವಿಸಿವೆ. ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಸಿದ್ದಾಪುರ ತಾಲೂಕಿನ ಕ್ಯಾದಗಿ ಗ್ರಾಮದಲ್ಲಿ ನಡೆದಿದೆ.

23 ವರ್ಷದ ಚಂದ್ರಶೇಖರ ನಾರಾಯಣ ಮೃತ ಯುವಕ. ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಚಂದ್ರಶೇಖರ ಮಣ್ಣಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯಾದ್ಯಂತ ನಿನ್ನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ ಭಾಗಗಳಲ್ಲಿ ಭಾರಿ ವರ್ಷಧಾರೆಗೆ ಜನರು ಕಂಗೆಟ್ಟಿದ್ದಾರೆ. ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಬೆಳಗಾವಿ ಜಿಲ್ಲೆಗೆ ಮಕ್ಕಳ ಕಳ್ಳರು ಬಂದಿದ್ದಾರಾ? ವದಂತಿಗಳಿಗೆ ಎಸ್ ಪಿ ಸ್ಪಷ್ಟನೆ

https://pragati.taskdun.com/belgaum-news/have-child-thieves-come-to-belgaum-district-sp-clarification-on-rumours/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button