ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವವನ್ನು ಸೆ.14 ಸುವರ್ಣ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಜರುಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರ ಗೌಡ ಹೇಳಿದರು.
ಸೋಮವಾರ ನಗರದ ವಾರ್ತಾ ಇಲಾಖೆಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳ 418 ಮಹಾವಿದ್ಯಾಲಯಗಳು ವಿಶ್ವವಿದ್ಯಾಲಯಗಳು ವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿವೆ. ಸುಮಾರು 1.64 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವವನ್ನು ಸೆ.14 ರಂದು ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಆಗಮಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಆಂದ್ರಪ್ರದೇಶದ ವಿಜಯನಗರಂ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ ಟಿ.ವಿ.ಕಟ್ಟಿಮನಿ ಮಾಡಲಿದ್ದಾರೆ ಎಂದರು.
ಅಲ್ಲದೆ ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು. ಸಮಾಜ ಸೇವಕ ರವಿಚಂದರ್, ಖ್ಯಾತ ಕನ್ನಡ ಚಲನಚಿತ್ರ ರಮೇಶ್ ಅರವಿಂದ, ದಾಸೋಹ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದರು.
10ನೇ ಘಟಿಕೋತ್ಸವದಲ್ಲಿ ಒಟ್ಟು 43,607 ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲಿದ್ದಾರೆ. ಇದರಲ್ಲಿ 11 ಚಿನ್ನದ ಪದಕವನ್ನು ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದರು.
ಕುತೂಹಲ ಕೆರಳಿಸಿದ ಇಂಗ್ಲೆಂಡ್ ರಾಣಿಯ ರಹಸ್ಯ ಪತ್ರ: 2085 ರವರೆಗೆ ತೆರೆದು ಓದುವಂತಿಲ್ಲ !
https://pragati.taskdun.com/world/queen-elizabethsecret-letter/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ