
ಪ್ರಗತಿವಾಹಿನಿ ಸುದ್ದಿ; ವಾರಾಣಾಸಿ: ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಾರಾಣಾಸಿ ಸ್ಥಳೀಯ ನ್ಯಾಯಾಲಯ ಹಿಂದೂ ಮಹಿಳೆಯರ ಅರ್ಜಿ ಸ್ವೀಕೃತವಾಗಿದೆ ಎಂದು ಮಹತ್ವದ ತೀರ್ಪು ನೀಡಿದೆ.
ಹಿಂದೂಗಳ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ತೀರ್ಪು ಹಿನ್ನೆಲೆಯಲ್ಲಿ ನಗರದಲ್ಲಿ ವಾರಾಣಾಸಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಬಿಗಿ ಪೊಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜ್ಞಾನವಾಪಿ ಮಸೀದಿ ಪ್ರಾಂಗಣದಲ್ಲಿ ಶೃಂಗಾರ ಗೌರಿ ಸೇರಿದಂತೆ ಹಿಂದೂ ದೇವತೆಗಳ ಶಿಲ್ಪಗಳಿವೆ. ಅವುಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕು ಎಂದು ಕೋರಿ ಐವರು ಹಿಂದೂ ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಮಸೀದಿ ಕಮಿಟಿಯಿಂದ ಅರ್ಜಿ ಸಲ್ಲಿಸಲಾಗಿತ್ತು. ಕಳೆದ ತಿಂಗಳು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.
ಇದೀಗ ಹಿಂದೂ ಮಹಿಳೆಯರ ಅರ್ಜಿ ಸ್ವೀಕೃತವಾಗಿದ್ದು, ವಿಚಾರಣೆ ನಡೆಸಲು ಕೋರ್ಟ್ ಅನುಮತಿ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಸೆಪ್ಟೆಂಬರ್ 22ಕ್ಕೆ ಮಹಿಳೆಯರ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.
ರಾಣಿ ಚನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
https://pragati.taskdun.com/latest/ranichennamma-univercityghatikotsavaactor-rameshdoctoratebelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ