Latest

ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ; ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಜಂಟಿ ಆಯುಕ್ತ, ಪಿಎ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಾಯುಕ್ತ ಮರು ಸ್ಥಾಪನೆ ಬಳಿಕ ಮೊದಲ ದಾಳಿ ನಡೆದಿದ್ದು, ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಹಾಗೂ ಪಿಎ ಇಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಪಶ್ಚಿಮ ವಿಭಾಗದ ಬಿಬಿಎಂಪಿ ಕಚೇರಿ ಮೇಲೆ ಲೋಕಾಯುಕ್ತ ಅಶೋಕ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಈ ವೇಳೆ 4 ಲಕ್ಷ ರೂಪಾಯಿ ಲಂಚದ ಹಣದೊಂದಿಗೆ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಸಿಕ್ಕಿ ಬಿದ್ದಿದ್ದಾರೆ.

ಖಾತೆ ಬದಲಾವಣೆ ಮಾಡಿಕೊಡಲು 4 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದಾಗ ಈ ದಾಳಿ ನಡೆದಿದೆ. ಇಬ್ಬರು ಅಧಿಕಾರಿಗಳನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್; ನೋಟಿಸ್ ಕೊಡುವ ಅಗತ್ಯವೇ ಇಲ್ಲ ಎಂದ ಕಂದಾಯ ಸಚಿವರು

https://pragati.taskdun.com/latest/no-need-to-issue-noticeencroachment-rajakaluver-ashok/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button