ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈಗಾಗಲೇ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜನರು ತತ್ತರಿಸಿರುವಾಗಲೇ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದೆ. ರಾಜ್ಯದಲ್ಲಿ ಇನ್ನೂ ಎರಡು ತಿಂಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ಇದರ ತೀವ್ರತೆ ಹೆಚ್ಚಾಗಿದೆ. ಹೀಗಾಗಿ ಈ ವರ್ಷ ವರುಣನ ಆರ್ಭಟ ಹೆಚ್ಚಾಗಿರುತ್ತದೆ. ಈವರೆಗೆ 271 ಮಿ.ಮೀ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದಲ್ಲಿ ಈ ವರ್ಷ ಭಾರಿ ಮಳೆಗೆ ಕಾರಣ ಹವಾಮಾನದಲ್ಲಿ ಬದಲಾವಣೆ ಹಾಗೂ ಶಿಯರ್ ಜೋನ್. ಶಿಯರ್ ಜೋನ್ ಎಂದರೆ ಸಮುದ್ರಮಟ್ಟದಿಂದ 11 ಡಿಗ್ರಿ ಅಕ್ಷಾಂಶದಿಂದ ಪೂರ್ವ ದಿಕ್ಕಿಗೆ ಹೆಚ್ಚಿನ ಗಾಳಿ ಬೀಸುತ್ತದೆ. ಇದೇ ಮಳೆ ಕಡಿಮೆ ಅಕ್ಷಾಂಶದಲ್ಲಿ 9 ಅಥವಾ 8ರ ವೇಗದಲ್ಲಿ ಪಶ್ಚಿಮ ವಲಯದಲ್ಲಿ ಗಾಳಿ ಬೀಸಿದಾಗ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ಮೇಲ್ಮೈ ಸುಳಿಗಾಳಿ ಆರಂಭವಾದರೆ 4-5 ದಿನ ಮಳೆಯಾಗುತ್ತದೆ. ಶಿಯರ್ ಜೋನ್ ಬಂದರೆ 3-4 ದಿನ ನಿರಂತರ ಮಳೆಯಾಗುತ್ತದೆ. ಇದರ ಪರಿಣಾಮವೇ ಬೆಂಗಳೂರಿನಲ್ಲಿ ಈ ಬಾರಿ ಮಳೆ ಹೆಚ್ಚಾಗಲು ಕಾರಣವಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಲೆಗಳ ದಸರಾ ರಜೆ: ಜಿಲ್ಲಾಧಿಕಾರಿ, ಜಿಪಂ ಸಿಇಒಗಳಿಗೆ ಮಾರ್ಪಾಡು ಅಧಿಕಾರ
https://pragati.taskdun.com/latest/dussehra-holiday-of-schools-dc-ceos-have-authority-to-change/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ