ಪ್ರಗತಿವಾಹಿನಿ ಸುದ್ದಿ; ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವೊಂದರ ಪತ್ರಿಕೋದ್ಯಮ ವಿಭಾಗದಲ್ಲಿಯೇ ವಾಮಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ ನಡೆದಿರುವ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರ ಕೊಠಡಿಯಲ್ಲಿ ಕೋಳಿ ತಲೆ, ಕಾಲು, ಕುಂಕುಮ, ಕೂದಲು, ಬಳೆ ಚೂರು ಹಾಗೂ ಇತ್ತೀಚೆಗೆ ಬದಲಾವಣೆಯಾಗಿದ್ದ ಹೆಚ್ ಓಡಿ ತೇಜಸ್ವಿ ನವಿಲೂರು ಅವರ ಭಾವಚಿತ್ರಗಳು ಪತ್ತೆಯಾಗಿದ್ದು, ವಾಮಾಚಾರದ ಶಂಕೆ ಬಗ್ಗೆ ಇನ್ನಷ್ಟು ಪುಷ್ಠಿ ನೀಡುವಂತಿದೆ ಎಂಬ ಆರೋಪಗಳು ಕೇಳಿಬಂದಿವೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆ; ಮುಖ್ಯಶಿಕ್ಷಕ ಸಸ್ಪೆಂಡ್
https://pragati.taskdun.com/latest/morarji-desai-schoolstudentmissingteacher-suspendedmandya/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ