Latest

ಮುರುಘಾಶ್ರೀ ಪ್ರಕರಣ; ಜಾಮೀನು ಅರ್ಜಿ ಮಾಧ್ಯಾಹ್ನಕ್ಕೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗದ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂಡೂಡಿ ಆದೇಶ ಹೊರಡಿಸಿದ್ದಾರೆ.

Home add -Advt

ಮುರುಘಾಶ್ರೀಗಳಿಗೆ ಇಂದು ಜಾಮೀನು ಸಿಗಲಿದೆಯೇ ಅಥವಾ ಮತ್ತೆ ಜೈಲೇ ಗತಿಯಾಗಲಿದೆಯೇ ಎಂಬುದು ಸಧ್ಯದ ಪ್ರಶ್ನೆಯಾಗಿದ್ದು, ರಾಜ್ಯದ ಜನರ ಚಿತ್ತ ಚಿತ್ರದುರ್ಗ ನ್ಯಾಯಾಲಯದತ್ತ ನೆಟ್ಟಿದೆ.

ಕಾಂಗ್ರೆಸ್ ನ 8 ಶಾಸಕರು ಬಿಜೆಪಿಗೆ

https://pragati.taskdun.com/politics/goacongress-mlasbjp-join/

Related Articles

Back to top button