ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೈತರಿಗೆ ಭಿಕ್ಷಾ ರೂಪದ ಪರಿಹಾರ ಬೇಡ, ನೈಜ ಬೆಳೆನಷ್ಟ ಪರಿಹಾರ ನೀಡಲಿ ಎಂದು ಸೆ. 26 ರಂದು ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬರು ಶಾಂತಕುಮಾರ ಹೇಳಿದರು.
ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಿರಂತರ ಮಳೆ, ಅತಿವೃಷ್ಟಿ ಹಾನಿಯಿಂದ ಲಕ್ಷಾಂತರ ಎಕರೆ ಬೆಳೆ ಮೆಕ್ಕೆಜೋಳ ಶೇಂಗಾ, ಕಡಲೆ, ಸೂರ್ಯಕಾಂತಿ ಮತ್ತಿತರ ಬೆಳೆಗಳು ಹಾನಿಯಾಗಿವೆ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ ಕೂಡಲೇ ಎಲ್ಲಾ ಅತಿವೃಷ್ಟಿ ಗ್ರಾಮ ಗಳಿಗೆ ಜಿಲ್ಲಾ ಹಾಗೂ ತಾಲೂಕು ಆಡಳಿತ ಬೆಳೆ ನಷ್ಟ ಸಮೀಕ್ಷೆ ನಡೆಸಿ ನೈಜ ನಷ್ಟ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಭಿಕ್ಷೆರೂಪದ ಪರಿಹಾರ ಬೇಡ, ನೈಜ ನಷ್ಟ ಕೊಡಿಸಬೇಕು ಎಂದು ಆಗ್ರಹಿಸಿದರು.
ರೈತರ ಸಾಲ ವಸೂಲಾತಿ ನಿಲ್ಲಿಸಿ ನವೀಕರಿಸಿ ಇರುವ ಸಾಲದ ಜೊತೆಗೆ ಆರ್ ಬಿ ಐ ನಿಯಮದಂತೆ ಹೆಚ್ಚುವರಿಯಾಗಿ ಶೇಕಡಾ 25ರಷ್ಟು ರೈತರಿಗೆ ಸಾಲ ನೀಡಬೇಕು. ಪ್ರಸಕ್ತ ಸಾಲಿಗೆ ಕಬ್ಬಿನ ಎಫ್ ಆರ್ ಪಿ ದರ ನಿಗದಿ ಮಾಡಿರುವುದನ್ನು ಪುನರ್ ಪರಿಶೀಲಿಸಬೇಕು ಎಂದರು.
ಕಬ್ಬು ಉತ್ಪಾದನೆಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ ಡಿ ಎ ಪಿ ಬೆಲೆ 350 ಏರಿಕೆಯಾಗಿದೆ ಕಟಾವು ಕೂಲಿ 400 ರೂಪಾಯಿ, ಬೀಜದ ಬೆಲೆ ಎಕರೆಗೆ 1000 ಹೆಚ್ಚುವರಿಯಾಗಿ ಏರಿಕೆಯಾಗಿದೆ, ಆದರೆ ಕೇಂದ್ರ ಸರ್ಕಾರ ಸಕ್ಕರೆ ಇಳುವರಿಯನ್ನು 10.25 ಏರಿಕೆ ಮಾಡಿ 3050 ನಿಗದಿ ಮಾಡಿದೆ, ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಬ್ಬಿನಿಂದ ಬರುವ ಸಕ್ಕರೆ ಇಳುವರಿ 10 ರಿಂದ 10.25 ಕೆ ಏರಿಕೆ ಮಾಡಿ ಕಬ್ಬು ಬೆಳೆ ರೈತರಿಗೆ ಕೇಂದ್ರ ಸರ್ಕಾರ ದ್ರೋಹ ಬಗೆದಿದೆ, ಇದರಿಂದ ರೈತರಿಗೆ ಟನ್ ಗೆ ಮತ್ತಷ್ಟು ನಷ್ಟವಾಗುತ್ತದೆ , ಉತ್ತರಪ್ರದೇಶ ಸರ್ಕಾರದ ಮಾನದಂಡದಂತೆ ಕನಿಷ್ಠ ಎಫ್ ಆರ್ ಪಿ 3500 ರೂಪಾಯಿ ನಿಗದಿ ಆಗಲೇಬೇಕು ಎಂದರು.
ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಿ ಖಾಸಗಿಕರಣ ಮಾಡಿ ಉಚಿತ ವಿದ್ಯುತ್ ನಿಲ್ಲಿಸಲು ಹುನ್ನಾರ ನಡೆಸಿದೆ ಇದನ್ನು ರಾಜ್ಯದ 38 ಲಕ್ಷ ಕೃಷಿ ಪಂಪ್ಸೆಟ್ ರೈತರು ವಿರೋಧಿಸುತ್ತೇವೆ, ರೈತರಿಗೆ ಕೃಷಿ ಪಂಪ್ಸೆಟ್ಗಳಿಗೆ ನೀಡುವ ಉಚಿತ ವಿದ್ಯುತ್ತನ್ನು ನಿಲ್ಲಿಸುವ ಹುನ್ನಾರದಿಂದ ಸಂಸತ್ತಲ್ಲಿ 2022 ವಿದ್ಯುತ್ ಕಾಯ್ದೆ ತಿದ್ದುಪಡಿ ಬಿಲ್ ಮಂಡಿಸಲಾಗಿದೆ, ಈಗಾಗಲೇ ತಮಿಳುನಾಡು, ತೆಲಂಗಾಣ, ಆಂಧ್ರ,ಪಂಜಾಬ್, ಕೇರಳ ಬಿಹಾರ್ ರಾಜ್ಯ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ ಅದರಂತೆ ಕರ್ನಾಟಕ ರಾಜ್ಯವು ಕೂಡ
ವಿದ್ಯುತ್ ಕಾಯ್ದೆ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ಲಿಖಿತ ಪತ್ರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಕರ್ನಾಟಕದ ರೈತರನ್ನು ಸಂರಕ್ಷಿಸಬೇಕು ಎಂದರು.
ಎಲ್ಲ ಕೃಷಿ ಉತ್ಪನ್ನಗಳಿಗೆ ಖಾತರಿ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತಂದು ಡಾ ಸ್ವಾಮಿನಾಥನ್ ವರದಿಯಂತೆ ಎಂ ಎಸ್ ಪಿ ಬೆಲೆ ನಿಗದಿಪಡಿಸಬೇಕು. ಮೊಸರು ಮಜ್ಜಿಗೆ ಅಪ್ಪಳ ಬೆಲ್ಲ ಕೃಷಿ ಉಪಕರಣಗಳು ಹನಿ ನೀರಾವರಿ ಉಪಕರಣಗಳು, ರಸಗೊಬ್ಬರ, ಕೀಟನಾಶಕ, ಗಳ ಮೇಲೆ ವಿಧಿಸಿರುವ ಜಿ ಎಸ್ ಟಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ರೈತರಿಗೆ ಕೃಷಿ ಸಾಲ ನೀಡುವಾಗ, ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣನೆ ಮಾಡಿ ಸಾಲ ನೀಡಬೇಕೆ, ಬೇಡವೇ, ಎಂಬ ನೀತಿ ಅನುಸರಿಸುತ್ತಿವೆ, ಇದನ್ನು ರದ್ದುಗೊಳಿಸಬೇಕು ಎಂದು ಆರ್ ಬಿ ಐ ಮುಂದೆ ಪ್ರತಿಭಟನೆ ನಡೆಸಿದಾಗ, ಈ ಬಗ್ಗೆ ಬ್ಯಾಂಕುಗಳ ಮುಖ್ಯಸ್ಥರು ಹಾಗೂ ರೈತ ಮುಖಂಡರ ಸಭೆ ಕರೆದು ಚರ್ಚಿಸುವುದಾಗಿ ಭರವಸೆ ನೀಡಿದ ಕರ್ನಾಟಕ ವಲಯದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯಸ್ಥರು ಭರವಸೆ ಹುಸಿಗೊಳಿಸಿದ್ದಾರೆ,ಇದು ರೈತರಿಗೆ ಮಾಡಿದ ಅಪಮಾನ ಎಂದರು.
ಸುರೇಶ ಮಾ ಪಾಟೀಲ್, ಗುರುಸಿದ್ದಪ್ಪ ಕೋಟೆಗೆ, ಈರಣ್ಣ ಅರಳಿಕಟ್ಟಿ , ಎಸ್, ಬಿ ಸಿದ್ದನಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮುರುಘಾಶ್ರೀ ಪ್ರಕರಣ; ಜಾಮೀನು ಅರ್ಜಿ ಮಾಧ್ಯಾಹ್ನಕ್ಕೆ ಮುಂದೂಡಿಕೆ
https://pragati.taskdun.com/politics/murughashreebail-hearingpostpone/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ