ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೊಲೀಸರ ಕಿರುಕುಳ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಕೊರಳೊಡ್ಡಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
25 ವರ್ಷದ ಕೀರ್ತಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸುಬ್ರಹ್ಮಣ್ಯನಗರ ಪೊಲೀಸರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಯುವಕ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದೆ.
ಮೃತ ಯುವಕ ಖಾಸಗಿ ಕಂಪನಿಯೊಂದರಲ್ಲಿ ಕಾರ್ ಪಾರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಕಂಪನಿಗೆ ಬಂದ ಕಾರ್ ಪಾರ್ಕಿಂಗ್ ಮಾಡುವುದು ಯುವಕನ ಕೆಲಸವಾಗಿತ್ತು. ಇನ್ನೋರ್ವ ಯುವಕ ಆ ಕಾರ್ ಗಳನ್ನು ವಾಪಸ್ ಕೊಡುವ ಕೆಲಸ ಮಾಡುತ್ತಿದ್ದ. ಆದರೆ ಎರಡು ದಿನಗಳ ಹಿಂದೆ ಕಂಪನಿಗೆ ಬಂದ ಕಾರ್ ನಲ್ಲಿ ಚಿನ್ನ ಕಳುವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕಾರು ಮಾಲೀಕ ಪೊಲಿಸರಿಗೆ ದೂರು ನೀಡಿದ್ದ. ಸುಬ್ರಹ್ಮಣ್ಯನಗರ ಪೊಲೀಸರು ಕೀರ್ತಿ ಹಾಗೂ ಇನೋರ್ವ ಯುವಕರಿಬ್ಬರನ್ನು ಕರೆದು ವಿಚಾರಣೆ ನಡೆಸಿದ್ದಾರೆ.
ಯುವಕ ಕೀರ್ತಿ ಮೇಲೆ ಪೊಲೀಸರು ಹಲ್ಲೆ ನಡೆಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಅವಮಾನಗೊಂದಯುವಕ ಪೊಲೀಸರ ಕಿರುಕುಳದಿದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಆಂಬುಲೆನ್ಸ್ ಸೇರಿ 3ವಾಹನಗಳ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ
https://pragati.taskdun.com/latest/accidenttwo-deathdavanagere/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ