Latest

14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ; ಸ್ಪಾ ಆಪರೇಟರ್ ಹಾಗೂ ಸಹಚರರ ಮೇಲೆ ಕೇಸು ದಾಖಲು

ಪ್ರಗತಿವಾಹಿನಿ ಸುದ್ದಿ, ಚಂಡಿಗಡ: ಹರಿಯಾಣದ ಗುರುಗ್ರಾಮ್‌ನ  ಸ್ಪಾ ಒಂದರಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ವೇಶ್ಯಾವಾಟಿಕೆಗೆ ಬಲವಂತಪಡಿಸಿದ ಆರೋಪದ ಮೇಲೆ ಸ್ಪಾ ಆಪರೇಟರ್ ಮತ್ತು ಆಕೆಯ ಸಹಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

10- 15 ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದುದಾಗಿ ಬಾಲಕಿ ಹೇಳಿಕೊಂಡಿದ್ದಾಳೆ. ತಾನು ಕೆಲಸ ಹುಡುಕುತ್ತಿದ್ದ ವೇಳೆ ಸ್ಪಾ ಮಾಲೀಕರ ಸಂಬಂಧಿಯಾಗಿರುವ ಮಹಿಳೆ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ ನಂತರ ವೇಶ್ಯಾವಾಟಿಕೆಗೆ ದೂಡಿದ್ದಳು. ಮೊದಲ ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳು ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದು ಇದೇ ಕೆಲಸದಲ್ಲಿ ಮುಂದುವರಿಯುವಂತೆ ಬಲವಂತ ಮಾಡುತ್ತಿದ್ದರು ಎಂದು ಬಾಲಕಿ ಆರೋಪಿಸಿದ್ದಾಳೆ.

Home add -Advt

ಸೆಪ್ಟೆಂಬರ್ 14 ರಂದು ಬಾಲಕಿ ಪೊಲೀಸರಿಗೆ ದೂರು ನೀಡಿದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. “ತನಿಖೆ ಪ್ರಾರಂಭಿಸಲಾಗಿದೆ. ನಾವು ಆರೋಪಗಳು ಮತ್ತು ದೂರಿನ ವಿಷಯಗಳನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ” ಎಂದು ಹೇಳಿದರು.

ಸಾಮಾಜಿಕ ಮಾಧ್ಯಮದಿಂದ ದೂರವಿರಲು ‘ವೂಲ್ಫ್ ಕಿಲ್ಲರ್’ಗೆ ಕೋರ್ಟ್ ಆದೇಶ

Related Articles

Back to top button