ಪ್ರಗತಿವಾಹಿನಿ ಸುದ್ದಿ; ಚಂಡೀಗಢ: ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ.
ವಿದ್ಯಾರ್ಥಿನಿಯೊಬ್ಬರು ತನ್ನ ಸಹಪಾಠಿಗಳ ಖಾಸಗಿ ವಿಡಿಯೋ ಆನ್ ಲೈನ್ ನಲ್ಲಿ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪಂಜಾಬ್ ನ ಮೊಹಾಲಿಯ ಚಂಡಿಗಢ ವಿವಿಯಲ್ಲಿ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿಗಳು ವಿಡಿಯೋ ಸೋರಿಕೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಓರ್ವ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿ ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ.
ಹಾಸ್ಟೇಲ್ ನಲ್ಲಿ ಯುವತಿಯರು ಸ್ನಾನ ಮಾಡುತ್ತಿರುವುದನ್ನು ಚಿತ್ರಿಕರಿಸಿಕೊಂಡು ಆ ವಿಡಿಯೋವನ್ನು ಆನ್ ಲೈನ್ ನಲ್ಲಿ ಹರಿ ಬಿಡಲಾಗಿದೆ. ಹಾಸ್ಟೇಲ್ ನಲ್ಲಿದ್ದ ಓರ್ವ ವಿದ್ಯಾರ್ಥಿನಯದ್ದೇ ಕೃತ್ಯ ಇದಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡಡೆಸಿದ್ದಾರೆ. ಅಲ್ಲದೇ ಕಾಲೇಜು ಆಡಳಿತ ಮಂಡಳಿ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಓರ್ವ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದ್ದು, ಇನ್ನೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಲೆಕ್ಕಾಧಿಕಾರಿ ವಿರುದ್ಧ ಸುಳ್ಳು ಲೈಂಗಿಕ ದೌರ್ಜನ್ಯ ದೂರು; ನಕಲಿ ವಿದ್ಯಾರ್ಥಿನಿಯರು ಸೇರಿ ನಾಲ್ವರ ಬಂಧನ
https://pragati.taskdun.com/latest/fake-casesexual-harrasment-case4-arrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ