Kannada NewsLatest

ಭಾರತ ಜೋಡೋ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಕರೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಾರತದ ಸಮಗ್ರತೆ ಮತ್ತು ಐಕ್ಯತೆ ಹಾಗೂ ನಮ್ಮ‌ ಮುಂದಿನ ಪೀಳಿಗೆಗಳ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಪಾದಯಾತ್ರೆ (ಭಾರತ ಜೋಡೋ) ಪಾದಯಾತ್ರೆಯಲ್ಲಿ ನಾವೆಲ್ಲ ಹೆಜ್ಜೆ ಹಾಕಿ ಪಾದಯಾತ್ರೆ ಯಶಸ್ವಿ‌ಗೊಳಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಕರೆ ನೀಡಿದರು.

ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕಗಳ ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿಅವರು ಮಾತನಾಡಿದರು.

ಭಾರತ ಜೋಡೋ ಪಾದಯಾತ್ರೆ ಈಗಾಗಲೇ ತಮಿಳುನಾಡು ಮತ್ತು ಕೆರಳದಲ್ಲಿ ಯಶಸ್ಸು ಕಂಡಿದೆ. ಸೆ. 30ರಿಂದ ಅ. 27ರ ವರೆಗೆ ರಾಜ್ಯದಲ್ಲಿ ಭಾತರ ಜೋಡೋ ಪಾದಯಾತ್ರೆ ನಡೆಯಲಿದ್ದು, ಬೆಳಗಾವಿ ಜಿಲ್ಲೆಯ 18 ಮತಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತುರನ್ನು ಮೂರು ವಿಭಾಗವಾಗಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕು. ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಮೊಳಕಾಲ್ಮೂರು ಮತಕ್ಷೇತ್ರದಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಬೇಕು ಎಂದು ತಿಳಿಸಿದರು.

2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಈಗಾಗಲೇ ತಯಾರಿ ನಡೆದಿದೆ. ಕಾರಣ ಎಲ್ಲಾ ಮೂಂಚುಣಿ ಘಟಕದ ಪದಾಧಿಕಾರಿಗಳು ಪಕ್ಷ ಸಂಘಟನೆಗೆ ಸಮಯ ಮೀಸಲಿಡಬೇಕು. ಜಿಲ್ಲೆಯಲ್ಲಿ ಯಾರಾದರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದರೆ ಅಂತವರನ್ನು ಒಂದೇ ಘಂಟೆಯಲ್ಲಿ ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

ನಂತರ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಲ್ಪನಾ ಜೋಶಿ ಅವರ ಅಧಿಕಾರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು, ಕಲ್ಪನಾ ಜೋಶಿ ಅವರ ಪಕ್ಷ ನಿಷ್ಠೆಯಿಂದ ಇವತ್ತು ಅವರನ್ನು ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷರಾಗಿ ‌ನೇಮಕ ಮಾಡಲಾಗಿದೆ. ಆದ್ದರಿಂದ ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮ ತ್ಯಾಗ ಅವಶ್ಯಕತೆ ಇದೆ. ಆದ್ದರಿಂದ ನಿಮ್ಮ ಹೆಚ್ಚಿನ ಸಮಯವನ್ನು ಪಕ್ಷಕ್ಕೆ ಮೀಸಲಿಡಬೇಕೆಂದು ಸೂಚಿಸಿದರು.

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಭಾರತ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಆಗಿರಬೇಕೆಂದು ಸಲಹೆ ನೀಡಿದ ಅವರು, ಕಲ್ಪನಾ ಜೋಶಿ ಅವರು ಪಕ್ಷಕ್ಕಾಗಿ 22 ವರ್ಷ ಕೆಲಸ ಮಾಡಿದ್ದರಿಂದ ಇಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.

ಕಲ್ಪನಾ ಜೋಶಿ ಮಾತನಾಡಿ, 22 ವರ್ಷಗಳ ನನ್ನ ರಾಜಕೀಯ ಜೀವನವನ್ನು ಗುರುತಿಸಿ ಪಕ್ಷ ಇಂದು ನನಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಮಾಡಿದೆ. ಕಾರಣ ಪಕ್ಷದಲ್ಲಿ ನಿಷ್ಠೆಯಿಂದ ಇನ್ನಷ್ಟು ಕೆಲಸ ಮಾಡಲು ಹುಮ್ಮಸ್ಸು ಬಂದಿದೆ ಎಂದರು.

ಇದೇ ವೇಳೆ ಕೆಪಿಸಿಸಿ ನೂತನ ಸದಸ್ಯರಿಗೆ ಸನ್ಮಾನಿಸಿ, ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾ ಸುನೀಲ್‌ ಹಣಮನ್ನವರ, ಮಹಾವೀರ ಮೋಹಿತೆ, ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಎಸ್ .ಎಫ್‌. ಜಕ್ಕಪ್ಪನವರ್‌, ಕಾಂಗ್ರೆಸ್‌ ಮುಖಂಡರಾದ ಗಜಾನನ ಮಂಗಸೂಳಿ, ಸದಾಶಿವ ಬೂಟಾಳಿ, ಸುನೀಲ್‌ ಸಂಕ್‌, ಶ್ಯಾಮ್‌ ಪೂಜಾರಿ, ಮಾಜಿ ಶಾಸಕರಾದ ರಮೇಶ ಕುಡಚಿ, ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಎಂ.ಜೆ, ಕಿರಣ ಸಾಧುನ್ನವರ್‌, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ್‌ ಸೇರಿದಂತೆ ಬೆಳಗಾವಿ ಜಿಲ್ಲೆಯ 18 ಮತಕ್ಷೇತ್ರಗಳ ಕೆಪಿಸಿಸಿ ಸದಸ್ಯರು ಮತ್ತು ಪದಾಧಿಕಾರಿಗಳು ಇದ್ದರು.

ಮಹಿಳಾ ಕಾನ್ಸ್ ಟೇಬಲ್ ಅಪಹರಣ-ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್

https://pragati.taskdun.com/latest/tumakurulady-constablemurder/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button