ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದೆಹಲಿಯ ವಿದ್ಯುತ್ ಲೇನ್ ಮಾರ್ಗದ ಇಡಿ ಕಚೇರಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾರೆ.
ಈ ವೇಳೆ ಡಿ.ಕೆ.ಶಿವಕುಮಾರ್ ತಮಗೆ ಅನಾರೋಗ್ಯ ಇರುವ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ. ಡಿ,ಕೆ.ಶಿ ಮನವಿ ಹಿನ್ನೆಲೆಯಲ್ಲಿ ವೈದ್ಯರ ನೆರವು ಪಡೆದಿದ್ದು, ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ವಿಚಾರಣೆ ವೇಳೆಯೂ ಡಿ.ಕೆ.ಶಿವಕುಮಾರ್ ಜೊತೆಗೆ ಇದ್ದಾರೆಎಂದು ತಿಳಿದುಬಂದಿದೆ.
ಮಹಿಳಾ ಕಾನ್ಸ್ ಟೇಬಲ್ ಅಪಹರಣ-ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್
https://pragati.taskdun.com/latest/tumakurulady-constablemurder/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ