Latest

ED ವಿಚಾರಣೆ ವೇಳೆಯೇ ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಶಾಕ್!

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಡಿ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಡಿಕೆಶಿ ವಿರುದ್ಧ ಕೇಸ್ ರದ್ದುಪಡಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

2018ರಲ್ಲಿ ಐಟಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಬಳಿ ಇದ್ದ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆಗೆ ಮುಂದಾಗಿದ್ದರು. ಈಗಲ್ ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿ ಡಿ.ಕೆ.ಶಿವಕುಮಾರ್ ಇದ್ದ ರೂಂ ನಲ್ಲಿ ಹಣ ವರ್ಗಾವಣೆಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದರು. ಈ ಕುರಿತ ತನಿಖೆಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿತ್ತು.

ಬರಿ ಹಣಕಾಸು ವ್ಯವಹಾರ ನಡೆದಿದ್ದರೆ ಕೇಸ್ ದಾಖಲಿಸಲಾಗಲ್ಲ. ಲೆಕ್ಕವಿಲ್ಲದ ವಹಿವಾಟು ನಡೆದಿದ್ದರೂ ಹೊಣೆಗಾರರಾಗಿದ್ದಾರೆ ಎಂದು ನಿರ್ಧರಿಸುವವರೆಗೂ ಕಾನೂನು ಕ್ರಮ ಆರಂಭವಾಗಲ್ಲ ಎಂದು ಡಿ.ಕೆ.ಶಿವಕುಮಾರ್ ವಿರುದ್ಧದ ಕೇಸ್ ರದ್ದು ಮಾಡಿ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಐಟಿ ಅಧಿಕಾರಿಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೇ ಡಿ.ಕೆ.ಶಿವಕುಮಾರ್ ಅವರಿಗೆ ನೋಟೀಸ್ ಜಾರಿ ಮಾಡಿದೆ.

ED ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ ಡಿ.ಕೆ.ಶಿವಕುಮಾರ್

https://pragati.taskdun.com/politics/d-k-shivakumaredenquiry/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button