ಪ್ರಗತಿವಾಹಿನಿ ಸುದ್ದಿ; ಶಿಗ್ಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪಂಚಮಸಾಲಿ ಸಮುದಾಯದವರು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿದರು.
ಮೀಸಲಾತಿಗಾಗಿ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪಂಚಮಸಾಲಿ ಮುಖಂಡರು ಸವಣೂರು-ಶಿಗ್ಗಾವಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಬಳಿಕ ಸಾವಿರಾರು ಜನರೊಂದಿಗೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕೂಡಲಸಂಗಮ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ, ಕಳೆದ ಎರಡು ವರ್ಷಗಳಿಂದ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಪ್ರತಿಬಾರಿ ಪ್ರತಿಭಟನೆ ನಡೆಸಿದಾಗಲೂ ಸರ್ಕಾರ ಒಂದೊಂದು ಗಡುವು ನೀಡುತ್ತಲೇ ಇದ್ದು, ಈಗಾಗಲೇ ನಾಲ್ಕು ಬಾರಿ ಸರ್ಕಾರ ಮಾತಿಗೆ ತಪ್ಪಿದೆ ಎಂದು ಕಿಡಿಕಾರಿದರು.
ಈ ಬಾರಿ ಹಾವೇರಿ ಜಿಲ್ಲೆಯ ಶಿಗ್ಗಾವ್ ನಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈಗಲಾದರೂ ಸರ್ಕಾರ ಎಚ್ಚೆತ್ತು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
BREAKING: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ
https://pragati.taskdun.com/latest/shivamogga3suspected-terroristarrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ