Latest

12 ಜಿಲ್ಲೆಗಳಲ್ಲಿ ಭಾರಿ ಮಳೆ; ಬೆಳಗಾವಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ತಣ್ಣಗಿದೆ ಎನ್ನುವಾಗಲೇ ಮತ್ತೆ ಧಾರಾಕಾರ ವರುನಾರ್ಭಟ ಆರಂಭವಾಗಿದೆ. ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಹಾಗೂ ನಾಳೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಇನ್ನು ಕರಾವಳಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ.

50 ಲಕ್ಷ ರೂ. ಪರಿಹಾರದ ಭರವಸೆ

https://pragati.taskdun.com/latest/50-lakhs-of-rs-promise-of-compensation/

Related Articles

Back to top button