ಪ್ರಗತಿವಾಹಿನಿ ಸುದ್ದಿ; ರಾಮನಗರ; ಸಚಿವ ಅಶ್ವತ್ಥನಾರಾಯಣ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆ ಚೆನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದ ಜೆಡಿಎಸ್ ಕಾರ್ಯಕರ್ತರು ಕಾರಿನ ಮೇಲೆ ಮೊಟ್ಟೆ, ಕಲ್ಲು ಎಸೆದುಪ್ರತಿಭಟನೆ ನಡೆಸಿದ್ದಾರೆ. ಯೋಗೇಶ್ವರ್ ಹಾಗೂ ಸಚಿವ ಅಶ್ವತ್ಥ ನಾರಾಯಣ ವಿರಿದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಇಷ್ಟುಕ್ಕೂ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚೆನ್ನಪಟ್ಟಣದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದ್ದೇ ಜೆಡಿಎಸ್ ಕಾರ್ಯಕರ್ತರು ಸಿಡಿದೇಳಲು ಕಾರಣ.
ತಮ್ಮನ್ನು ಕಡೆಗಡಿಸಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸೂಚನೆ ಮೇರೆಗೆ ಸಚಿವ ಅಶ್ವತ್ಥನಾರಾಯಣ ಶಂಕುಸ್ಥಾಪನೆಗೆ ಹೋಗದೇ ಗೈರಾಗಿದ್ದರು. ಸಿ.ಪಿ.ಯೋಗೇಶ್ವರ್ ಅವರಿಂದ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ. ಹಲವು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
5G ಇಂಟರ್ ನೆಟ್ ಸೇವೆಗೆ ಪ್ರಧಾನಿ ಮೋದಿ ಚಾಲನೆ
https://pragati.taskdun.com/latest/5g-servicelaunchingpm-modiindia/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ