ಪ್ರಗತಿವಾಹಿನಿ ಸುದ್ದಿ; ಮೈಸೂರು: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಅಧಿಕಾರಿಗಳು ಮತ್ತೆ ನೊಟೀಸ್ ನೀಡಿದ್ದಾರೆ.
ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಸಹೋದರರಿಗೆ ನೊಟೀಸ್ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನ ನಂಜನಗೂಡಿನಲ್ಲಿ ಮಾಹಿತಿ ನೀಡಿರುವ ಡಿ.ಕೆ.ಶಿವಕುಮಾರ್, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಮತ್ತೆ ಸಮನ್ಸ್ ಜಾರಿ ಮಾಡಿದೆ. ನನಗೆ ಹಾಗೂ ನನ್ನ ಸಹೋದರ ಡಿ.ಕೆ.ಸುರೇಶ್ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇರುವುದರಿಂದ ಸಮಯಾವಕಾಶ ನೀಡುವಂತೆ ಇಡಿಗೆ ಮನವಿ ಮಾಡಿದ್ದೇವೆ. ಆದರೆ ಇಡಿ ಅಧಿಕಾರಿಗಳು ಸಮಯ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 7ರಂದು ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಮತ್ತೆ ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಗಾಂಧಿ ಜಯಂತಿಯಂದು ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ; ರಾಹುಲ್ ಗಾಂಧಿಗೆ ಸಿಎಂ ಬೊಮ್ಮಾಯಿ ಕೌಂಟರ್
https://pragati.taskdun.com/politics/cm-basavaraj-bommairahul-gandhistatmentreaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ