Latest

JDS ವಕ್ತಾರ ಸೇರಿ 14 ಜನರ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 14 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಸಿ.ಪಿ.ಯೋಗೇಶ್ವರ್ ಕಾರು ಚಾಲಕ ವೆಂಕಟೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಜೆಡಿಎಸ್ ನ 14 ಜನರ ವಿರುದ್ಧ ಚೆನ್ನಪಟ್ಟಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

Home add -Advt

ಜೆಡಿಎಸ್ ವಕ್ತಾರ ವಿ.ನರಸಿಹ ಮೂರ್ತಿ, ನವೀನ್, ಪ್ರದೀಪ್, ನಂದೀಶ್, ಬೋರೇಗೌಡ, ಮನು, ಬಿ.ಎನ್.ಮಹೇಶ್, ಮಾಜಿ ತಾಲೂಕು ಪಂಚಾಯ್ತಿ ಸದಸ್ಯ ಗುರುಕುಮಾರ್, ಶಿವು, ಅರಸೇಗೌಡ, ತಾಲೂಕು ವಿದ್ಯಾರ್ಥಿ ಘಟಕದ ಆಶಿಶ್, ಡಿ.ಕುಮಾರ್, ಲೋಕೇಶ್, ಪ್ರದೀಪ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಕೂಡ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್ ಗೆ ಮತ್ತೆ ED ನೊಟೀಸ್

https://pragati.taskdun.com/politics/ed-summonced-k-shivakumard-k-suresh/

Related Articles

Back to top button