ಪ್ರಗತಿವಾಹಿನಿ ಸುದ್ದಿ; ರಾಯಚೂರು: ಭಾರಿ ಮಳೆಗೆ ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಐದು ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ನಡೆದಿದೆ.
ಪರಮೇಶ (45), ಪತ್ನಿ ಜಯಮ್ಮ(39) ಹಾಗೂ ಪರಮೇಶ ಸಹೋದರನ ಮಗ ಭರತ್(5) ಮೃತರು. ರಾಯಚೂರು ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮನೆ ಗೋಡೆ ತೇವಗೊಂಡು ಕುಸಿದು ಬಿದ್ದಿದೆ.
ಪರಮೇಶ ಹಾಗೂ ಜಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಣ್ಣಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟ ಬಾಲಕ ಭರತ್ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ವರುಣಾರ್ಭಟಕ್ಕೆ ಜಿಲ್ಲೆಯಲ್ಲಿ ಹಲವೆಡೆ ಮನೆ ಕುಸಿದು ಅವಘಡಗಳು ಸಂಭವಿಸುತ್ತಿವೆ.
ಬುದ್ಧಿವಾದ ಹೇಳಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ
https://pragati.taskdun.com/latest/hublicongress-leaderattackknif/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ