ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಫ್ ಎಸ್ ಎಲ್ ಮಹಿಳಾ ಅಧಿಕಾರಿ ಶೃತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಶೃತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಡಿವಾಳ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಶೃತಿ ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಎಫ್ ಎಸ್ ಎಲ್ ಅಧಿಕಾರಿಯಾಗಿದ್ದ ಶೃತಿ ಇತ್ತೀಚೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ
https://pragati.taskdun.com/latest/https-pragativahini-com-politics-pfi-bhagyaposter-releaser-ashoksiddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ