Latest
ಭೀಕರ ಅಪಘಾತ; ಮಹಿಳಾ ವರದಿಗಾರ್ತಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ವರದಿಗಾರ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಡೆದಿದೆ.
ಪತಿಯೊಂದಿಗೆ ದ್ವಿಚಕ್ರವಾಹನದಲ್ಲಿ ಸಾಗುತ್ತಿದ್ದ ವೇಳೆ ಗ್ಯಾಸ್ ಲಾರಿ ಡಿಕ್ಕಿಹೊಡೆದಿದ್ದು, ವರದಿಗಾರ್ತಿ ಮೇಲೆಯೇ ಲಾರಿ ಹರಿದಿದೆ. ಸ್ಥಳದಲ್ಲೇ ಪತ್ರಕರ್ತೆ ಸಾವನ್ನಪ್ಪಿದ್ದಾರೆ.
46 ವರ್ಷದ ಸಿ.ಆರ್.ಲತಾ ಮೃತ ವರದಿಗಾರ್ತಿ. ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರ್ತಿಆಗಿ ಲತಾ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಆರ್.ಟಿ.ನಗರ ಸಂಚಾರಿ ಪೊಲೀಸರು ಲಾರಿ ಚಾಲಕ ಸಿದ್ದಿಕ್ ನನ್ನು ಬಂಧಿಸಿದ್ದಾರೆ.
https://pragati.taskdun.com/politics/paresh-mesta-death-caseravikumarbjpsiddaramaiah/




