Latest

ಸೇನಾ ಹೆಲಿಕಾಪ್ಟರ್ ಪತನ; ಪೈಲಟ್ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡು, ಓರ್ವ ಪೈಲಟ್ ಸಾವನ್ನಪ್ಪಿರುವ ಘಟನೆ ಅರುಣಾಚಲಪ್ರದೇಶದ ತವಾಂಗ್ ನಲ್ಲಿ ನಡೆದಿದೆ.

ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ. ಪ್ರತಿನಿತ್ಯದಂತೆ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಏಕಾಏಕಿ ದುರಂತಕ್ಕೀಡಾಗಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಗಳು ಇದ್ದರು. ಓರ್ವ ಪೈಲಟ್ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಮೃತ ಪೈಲಟ್ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ದುರಂತದಲ್ಲಿ ಇಬ್ಬರು ಪೈಲಟ್ ಗಳು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಮಿಲಿಟರಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪೈಲಟ್ ಸೌರಭ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿದುಬಂದಿಲ್ಲ.
ಎಲ್ ಇಡಿ ಟಿವಿ ಸ್ಪೋಟ ; 16 ರ ಬಾಲಕ ಸಾವು

https://pragati.taskdun.com/latest/led-tv-explosionkills-16-year-old-boyuttar-pradesh/

Related Articles

Back to top button