Latest

ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 9 ಪ್ರಯಾಣಿಕರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಕೇರಳದ ಪಲಕ್ಕಾಡ್ ನಲ್ಲಿ ಸಂಭವಿಸಿದೆ.

ಟೂರಿಸ್ಟ್ ಬಸ್ ಕೇರಳ ರಾಜ್ಯ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ 9 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 38 ಪ್ರಯಾಣಿಕರು ಗಂಭೀರವಾಗಿ ಗಾಗಗೊಡಿದ್ದಾರೆ.

ಟೂರಿಸ್ಟ್ ಬಸ್ ಬಸೆಲಿಯಸ್ ವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಊಟಿಗೆ ಕರೆದೊಯ್ಯುತ್ತಿತ್ತು. ಈ ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಪೊಲಿಸರು ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತೆಗೆ ದಾಖಲಿಸಲಾಗಿದೆ. ಹೆಚ್ಚುಇನ ಮಾಹಿತಿ ತಿಳಿದುಬಂದಿಲ್ಲ.

ವಂಚನೆ ಪ್ರಕರಣ ಬೇಧಿಸಿದ ಚಿಕ್ಕೋಡಿ ಪೊಲೀಸರು: 51 ATM ಕಾರ್ಡ್ ಸಹಿತ ವ್ಯಕ್ತಿ ಬಂಧನ

https://pragati.taskdun.com/latest/man-arrested-with-51-atm-cards/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button