Kannada NewsLatest

ಕನ್ನಡಿಗರಿಗೇ ಉದ್ಯೋಗ ನೀಡಿ: ಕರವೆ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.

ಯುವ ಘಟಕದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ಕಳೆದ ಹಲವಾರು ವರ್ಷಗಳಿಂದ ಕರವೇ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತಾ ಬಂದಿದೆ. ಅದರ ಫಲವಾಗಿ ಈಗ ಕರ್ನಾಟಕ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿ ಮಾಡುವ ಕುರಿತು ಮಾತನಾಡಿದೆ. ಇದು ಕೇವಲ ಮಾತಾಗಿ ಉಳಿಯದೇ, ತ್ವರಿತಗತಿಯಲ್ಲಿ ಕಾನೂನಾಗಿ ಮಾರ್ಪಾಡಾಗಬೇಕು. ಕರ್ನಾಟಕದಲ್ಲಿ ಹುಟ್ಟುವ ‌ಕನ್ನಡಿಗರಿಗೆ ಆಧ್ಯತೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲಾತಿ ದೊರೆಯಬೇಕು. ಈ ನಿಟ್ಟಿನಲ್ಲಿ ‌ನಮ್ಮ ಹೋರಾಟ ನಿರಂತರವಾಗಿರುತ್ತದೆ. ಇನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಐಬಿಪಿಎಸ್ ಎಂಬ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಕವಾರು ಉದ್ಯೋಗಗಳನ್ನು ಸೃಷ್ಟಿಸಿದೆ. ಆದರೆ ವಿಪರ್ಯಾಸವೆಂದರೆ ನಮ್ಮ ಕರ್ನಾಟಕದ ಬ್ಯಾಂಕುಗಳಲ್ಲಿ ಹೊರ ರಾಜ್ಯದವರೇ ಹೆಚ್ಚಿನ ಪಾಲನ್ನು ಆಕ್ರಮಿಸಿಕೊಂಡಿದ್ದಾರೆ. ಇದರಿಂದ ನಮ್ಮ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಹೊರ ರಾಜ್ಯಗಳಿಂದ ಬಂದು ಬ್ಯಾಂಕ್ ಲ್ಲಿ ಕೆಲಸ ಮಾಡುವ ಇವರು ಕನ್ನಡ ಕಲಿಯದೇ ನಮ್ಮ ಕನ್ನಡಿಗರ ಮೇಲೆಯೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅನ್ಯ ಭಾಷೆ ಗೊತ್ತಿರದ ನಮ್ಮ ಗ್ರಾಮೀಣ ಭಾಗದ ಜನರಿಗೆ ತುಂಬಾ ಅನಾನುಕೂಲ ಆಗುತ್ತಿದೆ. ಈ ನಿಟ್ಟಿನಲ್ಲಿ, ಐಬಿಪಿಎಸ್ ಸಂಸ್ಥೆ ಇತ್ತ ಗಮನಹರಿಸಿ ಕರ್ನಾಟಕದ ಬ್ಯಾಂಕ್ ಗಳಲ್ಲಿ ಕನ್ನಡಿಗರಿಗೆ ಆಧ್ಯತೆ ನೀಡಬೇಕು. ಇದು ನಮ್ಮ ಬಹುವರ್ಷಗಳ ಬೇಡಿಕೆಯಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರಿಗೆ ನ್ಯಾಯ ಸಿಗುವವರೆಗೂ ನಮ್ಮ ರಾಜ್ಯದ ಯುವಕರ ಪರ ನಾವು ಗಟ್ಟಿ ಧ್ವನಿ ಎತ್ತುತ್ತೇವೆ‌ ಎಂದು ಕರವೇ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button