Latest

ಮಾಧ್ಯಮ ಸಿಬ್ಬಂದಿಗಳ ಮೇಲೆ ಪೊಲೀಸರ ದುಂಡಾವರ್ತನೆ; ಹಲ್ಲೆ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸರು ದುಂಡಾವರ್ತನೆ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಸೋನಿಯಾ ಗಾಂಧಿಯವರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ನಾಯಕರಿಗೆ ಇನ್ನಷ್ಟು ಹುರುಪು ನೀಡಿದ್ದಾರೆ. ಜಕ್ಕನಹಳ್ಳಿ ಬಳಿ ಕಾಂಗ್ರೆಸ್ ಪಾದಯಾತ್ರೆ ವೇಳೆ ಸೋನಿಯಾ ಗಾಂಧಿಯವರಿಗೆ ಸೆಕ್ಯುರಿಟಿ ಹೆಸರಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಾಧ್ಯಮ ಪ್ರತಿನಿಧಿಗಳ ಮೇಲೆ ದುಂಡಾವರ್ತನೆ ನಡೆಸಿರುವ ಪೊಲೀಸರು ಹಲ್ಲೆ ನಡೆಸಿ, ಎಳೆದಾಡಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ನೂಕಾಟ ತಳ್ಳಾಟ ನಡೆದಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಮಂಡ್ಯ ಜಿಲ್ಲಾ ಎಸ್ ಪಿ ಎನ್ ಯತೀಶ್ ಸ್ಥಳದಲ್ಲಿಯೇ ಇದ್ದರೂ ಮೌನವಾಗಿ ನೋಡುತ್ತಿದ್ದು, ಎಸ್ ಪಿ ನಡೆಗೆ ಮಾಧ್ಯಮ ಪ್ರತಿನಿಧಿಗಳು ಗರಂ ಆಗಿದ್ದಾರೆ.

ಮಾಧ್ಯಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Home add -Advt

ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಸ್ಪಂದನೆ

https://pragati.taskdun.com/politics/cm-basavaraj-bommairahul-gandhilatter/

Related Articles

Back to top button