Kannada NewsLatest

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ ತೀವ್ರಗೊಳಿಸಲು ಸಿದ್ಧತೆ: ನಾಳೆ ಮೂಡಲಗಿಯಲ್ಲಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ 2 ಎ ಮೀಸಲಾತಿ ಬಗ್ಗೆ ಸರಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಹಾಗೂ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ರೂಪರೇಷೆಗಳನ್ನು ಸಿದ್ದಪಡಿಸಿಸಲು ಮೀಸಲಾತಿ ಹೋರಾಟದ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ನಾಳೆ ಮೂಡಲಗಿಯಲ್ಲಿ ಸಭೆ ನಡೆಯಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪಿಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಅದೇ ಮಾದರಿಯಲ್ಲಿ ಪಂಚಮಸಾಲಿ ಸಮುದಾಯದವರಿಗೂ ಸರ್ವಪಕ್ಷ ಸಭೆ ಕರೆದು ಪಂಚಮಸಾಲಿ 2 ಎ‌ ಮೀಸಲಾತಿಯ ಬಗ್ಗೆ ಸಿಎಂ ಸಿಹಿ ಸುದ್ದಿ ಕೊಡುತ್ತಾರೆ ಎನ್ನುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಂಚಮಸಾಲಿ ಮೀಸಲಾತಿ ಹೋರಾಟ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಉಪವಾಸದ ಮೂಲಕ ಆರಂಭವಾಗಿತ್ತು. ಬಳಿಕ ಸರಕಾರ ಮಾತು ತಪ್ಪಿದ‌‌ ಹಿನ್ನೆಲೆಯಲ್ಲಿ ಬೃಹತ್ ಪಾದಯಾತ್ರೆ ನಡೆಸಿ ಸರಕಾರದ ಕಣ್ಣು ತೆರೆಸುವ ಕೆಲಸ ಮಾಡಿದ್ದೇವು ಎಂದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಕೊಟ್ಟ ಮಾತು ತಪ್ಪಿದರು. ಅದರಂತೆ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ‌ಅವರು ಕೂಡ ಮಾತು ತಪ್ಪಿದ ಹಿನ್ನೆಲೆಯಲ್ಲಿ ಶಿಗ್ಗಾವಿಯ ಅವರ ನಿವಾಸದ ಎದುರು ಧರಣಿ ನಡೆಸಿದೇವು. ಅಲ್ಲದೆ ನಮ್ಮ ಸಮುದಾಯದ ಬಸನಗೌಡ ಪಾಟೀಲ ಯತ್ನಾಳ ಸದನದಲ್ಲಿ ‌ಮೀಸಲಾತಿಯ ಬಗ್ಗೆ ಧ್ವನಿ ಎತ್ತಿದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಮ್ಮ ಸಮಾಜದ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಚಮಸಾಲಿ 2 ಎ ಮೀಸಲಾತಿ ನೀಡುವ ವಿಚಾರವಾಗಿ ಜನಪ್ರತಿನಿಧಿಗಳು ಕೇವಲ ಪತ್ರಿಕಾ ಪ್ರಕಟಣೆ ನೀಡುವ ಬದಲು ಸದನದಲ್ಲಿ ಗಟ್ಟಿ ಧ್ವನಿ ಎತ್ತಬೇಕು. ಈಗಾಗಲೇ ಪಂಚಮಸಾಲಿ ಹೋರಾಟಕ್ಕೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಆದರೆ ಜನಪ್ರತಿನಿಧಿಗಳು ಸಮರ್ಪಕವಾಗಿ ಸದನದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಆರ್.ಕೆ.ಪಾಟೀಲ, ಹಣಮಂತ ಕೊಂಗಾಲಿ, ರಾಜೇಂದ್ರ ಹರಕುಣಿ, ರುದ್ರಣ್ಣಾ ಚಂದರಗಿ, ಬಿ.ಐ.ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಾಧ್ಯಮ ಸಿಬ್ಬಂದಿಗಳ ಮೇಲೆ ಪೊಲೀಸರ ದುಂಡಾವರ್ತನೆ; ಹಲ್ಲೆ

https://pragati.taskdun.com/politics/bharath-jodo-padayatremedia-employeepolice-attack/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button