ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿ ನಡೆದಿದೆ.
ಆಳಂದ ತಾಲೂಕು ಆರೋಗ್ಯಾಧಿಕಾರಿ ಸುಶೀಲ್ ಕುಮಾರ್ ಅಂಬೂರೆ ವಿರುದ್ಧ ಗಾಣಗಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ಕಾರಿ ಕಾರ್ಯಾಲಯದ ಖಾತೆಯಿಂದ 2 ಲಕ್ಷ ಹಣ ಅಕ್ರಮವಾಗಿ ಡ್ರಾ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಗ್ಯಾಧಿಕಾರಿ ಸುಶೀಲ್ ಕುಮಾರ್ ವಿರುದ್ಧ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಅಬ್ದುಲ್ ಅಜೀಜ್ ದೂರು ನೀಡಿದ್ದಾರೆ. ಈ ಹಿಂದೆ ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾಗಿ ಸುಶೀಲ್ ಕುಮಾರ್ ಕಾರ್ಯನಿರ್ವಿಹಿಸಿದ್ದರು. 2021ರಲ್ಲಿ ಅವರು ಗೊಬ್ಬೂರಿನಿಂದ ಆಳಂದಗೆ ವರ್ಗಾವಣೆಯಾಗಿದ್ದರು. ವರ್ಗಾವಣೆಯಾದ ಬಳಿಕವೂ ಹಣ ಡ್ರಾ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸೋಲಾರ್ ಹಗರಣದ ತನಿಖೆಯನ್ನೂ ಮಾಡಿ; ನಾನು ತಪ್ಪು ಮಾಡಿದರೆ ನನ್ನನ್ನು ಗಲ್ಲಿಗೇರಿಸಲಿ ಎಂದ ಡಿ.ಕೆ.ಶಿವಕುಮಾರ್
https://pragati.taskdun.com/politics/d-k-shivakumared-sommoncereaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ